Friday, June 5, 2026
Homeಕರಾವಳಿಎಸ್‌ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಯ ಶುಲ್ಕ 60 ರೂ ನಿಂದ 50 ರೂಪಾಯಿಗೆ...

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆಯ ಶುಲ್ಕ 60 ರೂ ನಿಂದ 50 ರೂಪಾಯಿಗೆ ಇಳಿಕೆ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ

- Advertisement -
- Advertisement -

ಬೆಂಗಳೂರು : ಈ ವರ್ಷದ ಎಸ್‌ಎಸ್ ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕವನ್ನು  ತಲಾ 60 ರೂ. ಬದಲಾಗಿ 50 ರೂ.ಗೆ ಇಳಿಕೆ ಮಾಡಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕೆಳಕಂಡ ಬದಲಾವಣೆಗಳನ್ನೊಳಗೊಂಡಂತೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಅವರು ಸೂಚಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. ಪ್ರತಿ ವಿದ್ಯಾರ್ಥಿಯಿಂದ 60 ರೂ.ಬದಲಾಗಿ 50 ರೂ. ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!