Monday, April 29, 2024
Homeತಾಜಾ ಸುದ್ದಿಶಿಕ್ಷಣ ಇಲಾಖೆಯಿಂದ SSLC ಹಾಗೂ PUC ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಶಿಕ್ಷಣ ಇಲಾಖೆಯಿಂದ SSLC ಹಾಗೂ PUC ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ SSLC ಹಾಗೂ PUC ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 25-03-2024 ರಿಂದ 06-04-2024ರವರೆಗೆ ನಡೆಯಲಿದೆ.ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 01-03-2024ರಿಂದ ದಿನಾಂಕ 22-03-2024ರವರೆಗೆ ನಡೆಯಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ಮಾಹಿತಿ ನೀಡಿದ್ದು,2024ರ ಎಸ್.ಎಸ್‌.ಎಲ್.ಸಿ. ಪರೀಕ್ಷೆ-Iನ್ನು ದಿನಾಂಕ: 25.03.2024 ರಿಂದ 06.04.2024ರವರೆಗೆ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ನ್ನು ದಿನಾಂಕ: 01.03.2024 ರಿಂದ 22.03.2024858 ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಜಿಲ್ಲಾ ಉಪನಿರ್ದೇಶಕರು (ಪ.ಪೂ.ಶಿ)ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಅಂತಿಮ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣ www.kseab.karnataka.gov.inದಿಂದ ಪಡೆದುಕೊಂಡು ತಮ್ಮ ಶಾಲಾ/ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!