Tuesday, June 11, 2024
Homeಪ್ರಮುಖ-ಸುದ್ದಿಈ ವೆಬ್ ಸೈಟ್ ಗಳಲ್ಲಿ ಎಸ್ಸೆಸೆಲ್ಸಿ ಫಲಿತಾಂಶ ಲಭ್ಯ

ಈ ವೆಬ್ ಸೈಟ್ ಗಳಲ್ಲಿ ಎಸ್ಸೆಸೆಲ್ಸಿ ಫಲಿತಾಂಶ ಲಭ್ಯ

spot_img
- Advertisement -
- Advertisement -

ಬೆಂಗಳೂರು : ಕೊರೊನಾವೈರಸ್ ಸೋಂಕು ಹರಡುವಿಕೆಯ ಸವಾಲಿನ ನಡುವೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳನ್ನು ಬರೆದ ವಿದ್ಯಾರ್ಥಿಗಳ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ. 2020ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರ ಅಧಿಕೃತ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕ ರವಾನಿಸಲಾಗುತ್ತದೆ.

ಕಳೆದ ಜೂನ್. 25 ರಿಂದ ಜುಲೈ. 3ರವರೆಗೆ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಅದಾದ ಬಳಿಕ ಮೌಲ್ಯಮಾಪನ ಆರಂಭಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

ಈ ಬಾರಿ 7,43,477 ಸಾಮಾನ್ಯ ವಿದ್ಯಾರ್ಥಿಗಳು ಹಾಗೂ 20,857 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಂಟೈನ್ಮೆಂಟ್ ಪ್ರದೇಶಗಳ 3911 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದರು. ಕೋವಿಡ್-19 ಹೊರತುಪಡಿಸಿ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಎಸ್‌ಎಸ್‌ಎಲ್ ಸಿ ಫಲಿತಾಂಶ ಲಭ್ಯ:

www.karresults.nic.in

www.kseeb.kar.nic.in

- Advertisement -
spot_img

Latest News

error: Content is protected !!