Saturday, June 6, 2026
Homeತಾಜಾ ಸುದ್ದಿಅಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

ಅಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

- Advertisement -
- Advertisement -

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಅಗಸ್ಟ್ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ 18 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಇಂದಿನಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಆರಂಭವಾಗಲಿದೆ. ಜುಲೈ 30ರೊಳಗೆ ಪೂರ್ಣಗೊಳ್ಳಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.

ಇನ್ನು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಹೊರತಾಗಿ, ಬೇರೆ ಜಿಲ್ಲೆಗಳಲ್ಲಿ ಮೌಲ್ಯಮಾಪನ ಆರಂಭವಾಗಲಿದೆ. ರಾಜ್ಯದ 228 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ. ಇದರಲ್ಲಿ 71,154 ಮೌಲ್ಯ ಮಾಪನ ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ. ಜುಲೈ 30ರೊಳಗೆ ಮೌಲ್ಯಮಾಪನ ಪೂರ್ಣಗೊಳ್ಳಿದೆ ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!