- Advertisement -
- Advertisement -
ಬೆಂಗಳೂರು; 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults .nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
- Advertisement -