Saturday, June 6, 2026
Homeಕರಾವಳಿಮಂಗಳೂರುಬಂಟ್ವಾಳ; ನೇಣು ಬಿಗಿದುಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ; ನೇಣು ಬಿಗಿದುಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ; ನೇಣು ಬಿಗಿದುಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ ( 15) ಮೃತ ಬಾಲಕ.

ಆಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಭವಿಷ್ಯ  ಗಂಟೆಯಾದರೂ ವಾಪಸು ಬಂದಿಲ್ಲ. ಇದನ್ನು ತಾಯಿ ಹೋಗಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಗೊತ್ತಾಗಿದೆ.ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದ ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓದುವ ವಿಚಾರಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -

Latest News

error: Content is protected !!