Saturday, June 6, 2026
Homeಕರಾವಳಿಸುಳ್ಯ: SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ; ಕಳೆದು ವರ್ಷ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕ

ಸುಳ್ಯ: SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ; ಕಳೆದು ವರ್ಷ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕ

- Advertisement -
- Advertisement -

ಸುಳ್ಯ: SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಕಳೆದು ವರ್ಷವೂ ಇದೇ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಸುಳ್ಯದ ಎಲಿಮಲೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಶಮಂತ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಶಮಂತ್ ಮೂಲತಃ ಈತ ಚೊಕ್ಕಾಡಿಯವನಾಗಿದ್ದು, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿದ್ದ. ಶಮಂತ್ ಇಂದು ಬೆಳಿಗ್ಗಿನ ಜಾವ 6 ಗಂಟೆಯ ಹೊತ್ತಿಗೆ ಮನೆಯಿಂದ ಹೊರಟು ಬಂದಿದ್ದ ಎನ್ನಲಾಗಿದೆ. ಈ ವೇಳೆ ಶಾಲಾ ಆವರಣದ ಹಿಂಬದಿಯಲ್ಲಿರುವ ಸಣ್ಣ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳೀಯರು ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಹಿಂದೆಯೂ ಶಮಂತ್ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಇದಕ್ಕೆ ಬಲವಾದ ಕಾರಣ ಏನಾದರೂ ಇದ್ಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!