Saturday, June 6, 2026
Homeಕರಾವಳಿಉಡುಪಿನಿನ್ನೆ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದ ಉಡುಪಿಯ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

ನಿನ್ನೆ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದ ಉಡುಪಿಯ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಉಡುಪಿ : ಉಡುಪಿಯಲ್ಲಿ ನಿನ್ನೆ ಎಸ್ಸೆಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ಇರೋದು ದೃಢಪಟ್ಟಿದ್ದು, ಆಕೆಯ ಜೊತೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಹಾಗು ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ಇದೀಗ ಆತಂಕ ಎದುರಿಸುವಂತಾಗಿದೆ.

ವಿದ್ಯಾರ್ಥಿನಿಯ ತಂದೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ಗಂಟಲು ದ್ರವವನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಆಕೆಗೂ ಕೊರೊನಾ ಸೋಂಕು ಇರೋದು ದೃಢಪಟ್ಟಿದೆ.ಇದೀಗ ಆಕೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿದ್ಯಾರ್ಥಿನಿ ಇಂಗ್ಲೀಷ್ ಹಾಗೂ ಗಣಿತ ಪರೀಕ್ಷೆಗಳನ್ನು ಬರೆದಿದ್ದಾಳೆ. ಮುಂದಿನ ಪರೀಕ್ಷೆಗೆ ಆಕೆಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಹಾಗೇ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

- Advertisement -

Latest News

error: Content is protected !!