Thursday, June 4, 2026
Homeತಾಜಾ ಸುದ್ದಿಎಸ್ ಎಸ್ ಎಲ್ ಸಿ ಪೂರಕ ಫಲಿತಾಂಶ ಪ್ರಕಟ: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ...

ಎಸ್ ಎಸ್ ಎಲ್ ಸಿ ಪೂರಕ ಫಲಿತಾಂಶ ಪ್ರಕಟ: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯ

- Advertisement -
- Advertisement -

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದಿದ್ದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆ ನಂತರ https://karresults.nic.in/ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

- Advertisement -

Latest News

error: Content is protected !!