Saturday, May 18, 2024
Homeತಾಜಾ ಸುದ್ದಿಏಪ್ರಿಲ್ 2023ರ ಎಸ್ಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಏಪ್ರಿಲ್ 2023ರ ಎಸ್ಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಏಪ್ರಿಲ್ 2023ರ ಎಸ್ಸೆಸೆಲ್ಸಿ ಪರೀಕ್ಷೆಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.  ದಿನಾಂಕ 01-04-2023ರಿಂದ ದಿನಾಂಕ 15-04-2023ರವರೆಗೆ ಪರೀಕ್ಷೆ ನಡೆಯಲಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ

01-04-2023 ಶನಿವಾರ: ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗೂ ಸಂಸ್ಕೃತ

04-04-2023 ಮಂಗಳವಾರ : ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ

06-04-2023 ಗುರುವಾರ:  ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

08-04-2023 ಶನಿವಾರ : ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

10-04-2023 ಸೋಮವಾರ :  ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

12-04-2023 ಬುಧವಾರ :  ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

15-04-2023 ಶನಿವಾರ :  ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ

- Advertisement -
spot_img

Latest News

error: Content is protected !!