Saturday, October 17, 2026
Homeಅಪರಾಧಸೈಂಟ್ ಆಗ್ನೆಸ್ ಕಾಲೇಜು ಪ್ರತಿಭಟನೆ; ABVP ಮುಖಂಡನಿಗೆ ಪೊಲೀಸರಿಂದ ಕಪಾಳ ಮೋಕ್ಷ ಪ್ರಕರಣ; ಎಸಿಪಿ ರವೀಶ್...

ಸೈಂಟ್ ಆಗ್ನೆಸ್ ಕಾಲೇಜು ಪ್ರತಿಭಟನೆ; ABVP ಮುಖಂಡನಿಗೆ ಪೊಲೀಸರಿಂದ ಕಪಾಳ ಮೋಕ್ಷ ಪ್ರಕರಣ; ಎಸಿಪಿ ರವೀಶ್ ನಾಯಕ್ ವಿರುದ್ಧ ಕ್ರಮಕ್ಕೆ ABVP ಆಗ್ರಹ

- Advertisement -
- Advertisement -

ಮಂಗಳೂರು: ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಎಬಿವಿಪಿ ಮುಖಂಡನಿಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಎಸಿಪಿ ರವೀಶ್ ನಾಯಕ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿತ ಎಸಿಪಿ ರವೀಶ್ ನಾಯಕ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯಾರ್ಥಿಗಳ ಮನವಿ ಸ್ವೀಕರಿಸಲು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಬೇಕು ಎಂದು ಎಬಿವಿಪಿ ಮುಖಂಡರು ಪಟ್ಟು ಹಿಡಿದರು. ಈ ಸಂಬಂಧ ಸ್ಥಳದಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ಗಳೊಂದಿಗೆ ಎಬಿವಿಪಿ ಮುಖಂಡರು ಮಾತಿನ ಚಕಮಕಿ ನಡೆಸಿದರು.

ಬೆಳಗ್ಗೆ 11 ಗಂಟೆಯೊಳಗೆ ಪೊಲೀಸ್ ಕಮಿಷನರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು. ಇಲ್ಲದಿದ್ದರೆ ನೇರವಾಗಿ ಕಮಿಷನರ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು ವಿದ್ಯಾರ್ಥಿಗಳನ್ನು ಮನವೊಲಿಸಲು ಪ್ರಯತ್ನಿಸಿದರೂ, ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದರು.

ಈ ವೇಳೆ ವಿದ್ಯಾರ್ಥಿ ನಾಯಕರ ಹಾಗೂ ಪೊಲೀಸರ ನಡುವೆ ವಾಗ್ವಾದ ಮುಂದುವರಿಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಮತ್ತು ಎಸಿಪಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು ಎಂದು ವರದಿಯಾಗಿದೆ.

- Advertisement -

Latest News

error: Content is protected !!