Thursday, June 4, 2026
Homeಕರಾವಳಿಬೆಳ್ತಂಗಡಿ : ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ಅನಾರೋಗ್ಯದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಲಾಯಿಲ ಕೊಯ್ಯೂರು ಕ್ರಾಸ್ ಬಳಿಯ ಉಮೇಶ್ ಶೆಟ್ಟಿ ಎಂಬವರ ಪತ್ನಿ ಕವಿತಾ ಶೆಟ್ಟಿ(40) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಕವಿತಾ ಶೆಟ್ಟಿ ಲಾಯಿಲ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಕ್ಲರ್ಕ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಒಂದು ಗಂಡು , ಒಂದು ಹೆಣ್ಣು ಮಗಳಿದ್ದು, ಮಗ ಡಿಪ್ಲೋಮಾ ,ಮಗಳು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಮಂಗಳೂರು ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಮನೆಗೆ ತರಲು ಲಾಯಿಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯವರು ಸಹಕರಿಸಿದ್ದಾರೆ.

- Advertisement -

Latest News

error: Content is protected !!