Tuesday, May 7, 2024
Homeತಾಜಾ ಸುದ್ದಿಕೇದಾರನಾಥ ಯಾತ್ರಾರ್ಥಿಗಳಿಗೆ ರಸ್ತೆ ಮಾರ್ಗದಲ್ಲೂ ಮೊಬೈಲ್, ಇಂಟರ್ ನೆಟ್ ಸೇವೆ ಲಭ್ಯ

ಕೇದಾರನಾಥ ಯಾತ್ರಾರ್ಥಿಗಳಿಗೆ ರಸ್ತೆ ಮಾರ್ಗದಲ್ಲೂ ಮೊಬೈಲ್, ಇಂಟರ್ ನೆಟ್ ಸೇವೆ ಲಭ್ಯ

spot_img
- Advertisement -
- Advertisement -

ಡೆಹ್ರಾಡೂನ್: ಕೇದಾರನಾಥ ಯಾತ್ರಾರ್ಥಿಗಳಿಗೆ ಮೊಬೈಲ್ ಮತ್ತು ಡೇಟಾ ಸೇವೆಗಳನ್ನು ಒದಗಿಸಲು ರಿಲಯನ್ಸ್ ಜಿಯೋ ಸಂಸ್ಥೆ ಮುಂದಾಗಿದ್ದು, ಗೌರಿಕುಂಡ ಮತ್ತು ಕೇದಾರನಾಥ ನಡುವಿನ ಮಾರ್ಗದಲ್ಲಿ ಈ ಸೇವೆಯು ಲಭ್ಯವಾಗಲಿದೆ. 

ರಿಲಯನ್ಸ್ ಜಿಯೋ ಮೊಬೈಲ್ ಮತ್ತು ಡೇಟಾ ಸೇವೆಗಳನ್ನು ಒದಗಿಸುತ್ತಿರುವ ಮೊದಲ ಟೆಲಿಕಾಂ ಆಪರೇಟರ್ ಆಗಿದೆ ಎಂದು ಕಂಪನಿಯು ತಿಳಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಎರಡು ವರ್ಷಗಳ ಬಳಿಕ ಪುನರಾರಂಭಗೊಂಡಿದ್ದು, ಈ ವರ್ಷ ಹಿಮಾಲಯದ ಪುಣ್ಯಕ್ಷೇತ್ರಗಳಿಗೆ ಯಾತ್ರಾರ್ಥಿಗಳು ಭಾರೀ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.

ಇದರನ್ವಯ ಯಾತ್ರಾರ್ಥಿಗಳಿಗೆ ತೊಂದರೆಯಾಗದಂತೆ ಗೌರಿಕುಂಡ ಮತ್ತು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‌ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿದೆ.

ಈಗಾಗಲೇ ಕೆಲವು ಪ್ರದೇಶಗಳಾದ ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‌ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದ್ದು, ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ ಮೊಬೈಲ್ ನೆಟ್‌ವಕ್‌ರ್ಗೆ ಫೈಬರ್ ಲಿಂಕ್ ನೀಡಲಾಗಿದೆ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!