- Advertisement -
- Advertisement -
ಮೈಸೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ಇದೀಗ ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರನ್ನು 10 ದಿನದೊಳಗೆ ಘೋಷಿಸಲಿದ್ದೇವೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.
ವಿ.ವೈ. ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಗಳ ಅಧ್ಯಕ್ಷರ ಹೆಸರನ್ನು ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂದು ತಿಳಿಸಿದ್ದಾರೆ.
- Advertisement -