- Advertisement -


- Advertisement -
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯು ಆಗಸ್ಟ್ 3 ರಂದು ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಸೋಮವಾರ (ಆಗಸ್ಟ್ 3) ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದು ನಿಶ್ಚಿತ ಎಂದು ಹೇಳಿದರು.
“ಸಚಿವ ಸಂಪುಟ ವಿಸ್ತರಣೆ ಖಚಿತವಾಗಿರುವುದರಿಂದಲೇ, ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಲೋಕಭವನದಲ್ಲಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ,” ಎಂದು ಅವರು ತಿಳಿಸಿದರು.
- Advertisement -


