- Advertisement -
- Advertisement -
ಮಂಗಳೂರು: ರಾಜ್ಯ ಸರಕಾರ ಶೀಘ್ರವೇ ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ “ರಾಜ್ಯ ಇಎಸ್‌ಐ ಸೊಸೈಟಿ’ ರಚಿಸಬೇಕೆಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಆಗ್ರಹಿಸಿದ್ದಾರೆ.
ಈ ಕುರಿತಂತೆ ಬ್ರಿಜೇಶ್ ಚೌಟ ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ರಾಜ್ಯ ಇಎಸ್‌ಐ ಸೊಸೈಟಿ ರಚನೆಯಿಂದ ಮೂಲಸೌಕರ್ಯದ ತ್ವರಿತ ಸುಧಾರಣೆ, ವೈದ್ಯಕೀಯ ಉಪಕರಣಗಳ ಖರೀದಿ ಸೇರಿದಂತೆ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅನುಕೂಲವಾಗುವುದು. ಅಷ್ಟೇಅಲ್ಲದೆ ಅನುಭವಿ ತಜ್ಞ ವೈದ್ಯರು ಮತ್ತು ನುರಿತ ಸಿಬಂದಿಯನ್ನು ನೇಮಕ ಮಾಡಲು ಇದು ಸಹಾಯವಾಗಲಿದೆ ಎಂದು ತಿಳಿಸಿದರು.
ಕ್ಯಾ| ಚೌಟರು ಮಂಗಳೂರು ಇಎಸ್‌ಐ ಆಸ್ಪತ್ರೆಯ ಸಮಸ್ಯೆಗಳ ಕುರಿತು ಚರ್ಚಿಸಲು ಇತ್ತೀಚೆಗೆ ದಿಲ್ಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಎಂದು ತಿಳಿದು ಬಂದಿದೆ.
- Advertisement -