Tuesday, May 7, 2024
Homeತಾಜಾ ಸುದ್ದಿಕೇಂದ್ರ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ರಚನೆ

ಕೇಂದ್ರ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ರಚನೆ

spot_img
- Advertisement -
- Advertisement -

ಬೆಂಗಳೂರು: ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಪುನರ್ ರಚಿಸಲಾಗಿದೆ. ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಪುನರ್ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ ನಾಮನಿರ್ದೇಶನ ನಡೆಯಲಿದೆ. ಅಲ್ಲದೇ ವಾರ್ಷಿಕ 150 ಕೋಟಿ ರೂಪಾಯಿ ಅನುದಾನ ಹಂಚಿಕೆಯಾಗಲಿದೆ.

ಸಂಸ್ಥೆಯಲ್ಲಿ ಯೋಜನೆ, ಆರ್ಥಿಕ, ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ, ಶುದ್ಧ ಮತ್ತು ಹಸಿರು ಇಂಧನ ಮತ್ತು ಆರ್ಥಿಕತೆ ಮತ್ತು ಹಣಕಾಸು ವಲಯಗಳಾಗಿ ಒಟ್ಟು 8 ವಲಯ ಪರಿಣಿತರನ್ನು ಸಲಹೆಗಾರರನ್ನಾಗಿ ನೇಮಿಸಲಾಗುತ್ತದೆ.‌

ಅಲ್ಲದೇ ಪರಿವರ್ತನಾ ಸಂಸ್ಥೆಯಲ್ಲಿ ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣ ಮತ್ತು ನಗರಾಭಿವೃದ್ಧಿ, ಆರ್ಥಿಕ ಮತ್ತು ಸಾಮಾಜಿಕ, ಆರೋಗ್ಯ ಮತ್ತು ಪೋಷಣೆ, ಶುದ್ಧ ಮತ್ತು ಹಸಿರು ಇಂಧನ ವಿಜ್ಞಾನ ಮತ್ತು ತಂತ್ರಜ್ಞಾನ , ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶ, ಆರ್ಥಿಕತೆ ಮತ್ತು ಹಣಕಾಸು ವಿಭಾಗಗಳನ್ನು ಕೂಡಾ ರಚಿಸಲಾಗುತ್ತದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಪರಿವರ್ತನಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಲಹೆಗಾರರಾಗಿರಲಿದ್ದಾರೆ.

ಬಡತನ ನಿರ್ಮೂಲನೆ, ಅದಾಯ, ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆ, ಸೇವೆಗಳ ಸರಳೀಕರಣ, ಸ್ವಚ್ಛ ಮತ್ತು ಹಸಿರು ಇಂಧನ, ಸಂಪನ್ಮೂಲಗಳ ನಿರ್ವಹಣೆ, ಲಿಂಗ ಸಮಾನತೆ, ಕೈಗಾರಿಕೆ ಮತ್ತು ಮೂಲಸೌಕರ್ಯ, ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿಗಳಿಗೆ ಎಂಟು ವಿಷಯ ತಜ್ಞರು ನೇಮಕವಾಗಲಿದ್ದು, ಐಐಎಸ್ಸಿ, ಐಐಎಂಬಿ, ಐಸೆಕ್, ಎನ್ಎಲ್ಎಸ್ ಯು ಸೇರಿದಂತೆ 14 ಪ್ರಖ್ಯಾತ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಪಾಲುದಾರ ಸಂಸ್ಥೆಗಳಾಗಿ ನೇಮಿಸಲಾಗುತ್ತದೆ.

- Advertisement -
spot_img

Latest News

error: Content is protected !!