Friday, October 11, 2024
Homeತಾಜಾ ಸುದ್ದಿBIG NEWS : ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅನುಮತಿ

BIG NEWS : ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅನುಮತಿ

spot_img
- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೂಲಿ-ಕಾರ್ಮಿಕರಿಗೆ ಬಿಗ್ ರಿಲೀಫ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಬೇರೆ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಶೇ.40ರಷ್ಟು ಕೆಎಸ್ ಆರ್ ಟಿ ಸಿ ಬಸ್ ಗಳಲ್ಲಿಯೇ ಕರೆತಲು ಅನುಮತಿಸಿ, ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಪರಿಸ್ಥಿತಿಯಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ತಮ್ಮ ಗ್ರಾಮಗಳಿಗೆ ಹಿಂತಿರುಗಲು ಅಥವಾ ನಿರ್ಮಾಣ ಮತ್ತು ಇತರೆ ಕೆಲಸಗಳಿಗಾಗಿ ನಗರಗಳಿಗೆ ಹೋಗಲು ಬಯಸುತ್ತಿದ್ದಾರೆ.

ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 19-04-2020ರಂದು ಜಾರಿ ಮಾಡಿರುವಂತಹ ಆದೇಶದನ್ವಯ ಈ ವಲಸೆ ಕಾರ್ಮಿಕರನ್ನು ಹಾಗೂ ಕೂಲಿ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾತಂರಿಸಲು ಅನುಮಿತಿ ನೀಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಸಾಮಾನ್ಯ ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳುತ್ತದೆ.

ಅದ್ದರಿಂದ ದಿನಾಂಕ 19-04-2020ರ ದೇಶದ Standard Operation Protocol ರಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕೆಎಸ್ ಆರ್ ಟಿ ಸಿ ಬಸ್ಸುಗಳನ್ನು ಉಪಯೋಗಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು, ಸದರಿ ಬಸ್ಸುಗಳಲ್ಲಿ ಶೇ.40ರಷ್ಟು ಮಾತ್ರ ಭರ್ತಿ ಮಾಡುವಂತೆ ನೋಡಿಕೊಳ್ಳತಕ್ಕದ್ದು.

ಸ್ಥಳಾಂತರಿಸುವ ವಲಸೆ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಮಾಸ್ಕ್ ಗಳನ್ನು ಹಾಗೂ ಗ್ಲೌವ್ಸ್ ಗಳನ್ನು ನೀಡತಕ್ಕದ್ದು. ಈ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಕೋರಿದೆ ಎಂಬುದಾಗಿ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!