Tuesday, May 7, 2024
Homeತಾಜಾ ಸುದ್ದಿಸರ್ಕಾರಿ ಪಿಯು‌ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆ ನೇರ ನೇಮಕಾತಿ ಮೂಲಕ ಭರ್ತಿಗೆ ರಾಜ್ಯ...

ಸರ್ಕಾರಿ ಪಿಯು‌ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆ ನೇರ ನೇಮಕಾತಿ ಮೂಲಕ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

10 ವಿಷಯಗಳ ಒಟ್ಟು 778 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಅನುಮತಿ ನೀಡಲಾಗಿದೆ.

ಸದ್ಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 100 ಕನ್ನಡ, 120 ಇಂಗ್ಲಿಷ್, 120 ಇತಿಹಾಸ, 180 ಅರ್ಥಶಾಸ್ತ್ರ, 20 ಭೂಗೋಳಶಾಸ್ತ್ರ, 80 ವಾಣಿಜ್ಯ ಶಾಸ್ತ್ರ, 75 ಸಮಾಜಶಾಸ್ತ್ರ, 75 ರಾಜ್ಯಶಾಸ್ತ್ರ, 2 ಮನ:ಶಾಸ್ತ್ರ ಮತ್ತು 6 ಗಣಕ ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಖಾಲಿ‌ ಇವೆ.

ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ರವಾನಿಸಲಾಗಿದೆ.

- Advertisement -
spot_img

Latest News

error: Content is protected !!