Sunday, June 7, 2026
Homeತಾಜಾ ಸುದ್ದಿಸರ್ಕಾರಿ ಕಚೇರಿಗಳಲ್ಲಿ ಇನ್ನು ಸಾರ್ವಜನಿಕರು ಫೋಟೋ, ವಿಡಿಯೋ ಮಾಡುವಂತಿಲ್ಲ; ರಾಜ್ಯ ಸರ್ಕಾರದಿಂದ ನಿಷೇಧ ವಿಧಿಸಿ ಆದೇಶ

ಸರ್ಕಾರಿ ಕಚೇರಿಗಳಲ್ಲಿ ಇನ್ನು ಸಾರ್ವಜನಿಕರು ಫೋಟೋ, ವಿಡಿಯೋ ಮಾಡುವಂತಿಲ್ಲ; ರಾಜ್ಯ ಸರ್ಕಾರದಿಂದ ನಿಷೇಧ ವಿಧಿಸಿ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಇನ್ನು ಫೋಟೋ ತೆಗೆಯುವಂತಿಲ್ಲ ಮತ್ತು ವೀಡಿಯೋ ಮಾಡುವಂತಿಲ್ಲ. ಈ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೇ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಮತ್ತು ವೀಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ‌.

- Advertisement -

Latest News

error: Content is protected !!