Thursday, June 4, 2026
Homeತಾಜಾ ಸುದ್ದಿಈ ಬಾರಿ ಸರಳ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ‌ ನಿರ್ಧಾರ

ಈ ಬಾರಿ ಸರಳ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ‌ ನಿರ್ಧಾರ

- Advertisement -
- Advertisement -

ಮೈಸೂರು: ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಸಕ್ತ ವರ್ಷ ಸರಳ ದಸರಾ ಆಚರಣೆಗೆ ನಿರ್ಧಾರ ಮಾಡಿರುವ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಮಹದೇವಪ್ಪ ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 15 ರಿಂದ 24 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು, ಈಗಾಗಲೇ ಗಜ ಪಡೆ ಅರಮನೆ ಆವರಣದಲ್ಲಿ ಬೀಡು ಬಿಟ್ಟಿವೆ.

- Advertisement -

Latest News

error: Content is protected !!