Wednesday, June 24, 2026
Homeತಾಜಾ ಸುದ್ದಿಚಂದ್ರಯಾನ ಯಶಸ್ವಿ ಹಿನ್ನೆಲೆಯಲ್ಲಿ 500 ಇಸ್ರೋ ವಿಜ್ಞಾನಿಗಳಿಗೆ ರಾಜ್ಯ ಸರ್ಕಾರದಿಂದ ಸನ್ಮಾನ

ಚಂದ್ರಯಾನ ಯಶಸ್ವಿ ಹಿನ್ನೆಲೆಯಲ್ಲಿ 500 ಇಸ್ರೋ ವಿಜ್ಞಾನಿಗಳಿಗೆ ರಾಜ್ಯ ಸರ್ಕಾರದಿಂದ ಸನ್ಮಾನ

- Advertisement -
- Advertisement -

ಬೆಂಗಳೂರು: ಚಂದ್ರಯಾನ 3  ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ ನಡೆಸಲು ತೀರ್ಮಾನಿಸಲಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳಿಗೆ ಸನ್ಮಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.ಸೆಪ್ಟೆಂಬರ್ 2ರ ನಂತರ ವಿಜ್ಞಾನಿಗಳಿ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.

ಇಂದು ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನ ಕಾರ್ಯಕ್ರಮದ ಬಗ್ಗೆ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!