Thursday, June 4, 2026
Homeತಾಜಾ ಸುದ್ದಿಕೋವಿಡ್ ನಾಲ್ಕನೇ ಅಲೆ ಆತಂಕ ಹಿನ್ನೆಲೆ: ಮತ್ತೆ ಮಾಸ್ಕ್ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಕೋವಿಡ್ ನಾಲ್ಕನೇ ಅಲೆ ಆತಂಕ ಹಿನ್ನೆಲೆ: ಮತ್ತೆ ಮಾಸ್ಕ್ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರಿನಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.ಆದರೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಬಗ್ಗೆ ಇನ್ನೂ ಸರ್ಕಾರ ತೀರ್ಮಾನಿಸಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

ಏರ್ ಪೋರ್ಟ್ ಗಳಲ್ಲಿ ಮತ್ತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದ್ದು, ಬುಧವಾರ ಪ್ರಧಾನಿ ಮೋದಿ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ಬಳಿಕ ರಾಜ್ಯ ಸರ್ಕಾರ ಕೆಲವು ಸ್ಪಷ್ಟ ಮಾರ್ಗಸೂಚಿ ಹೊರಡಿಸುವ ನಿರೀಕ್ಷೆ ಇದೆ.

- Advertisement -

Latest News

error: Content is protected !!