Thursday, June 4, 2026
Homeತಾಜಾ ಸುದ್ದಿಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ:ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ:ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದ ಹಿನ್ನೆಲೆಯಲ್ಲಿ ಪಿಎಸ್ ಐ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ.

ಪರೀಕ್ಷೆ ಬರೆದಿದ್ದ 54,289 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ಅಪಾದಿತರನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಇರಲಿದೆ.

ಶೀಘ್ರದಲ್ಲೇ ಮರು ಪರೀಕ್ಷೆಗೆ ದಿನಾಂಕ ನಿಗದಿಯಾಗಲಿದ್ದು, ಕಳೆದ ಬಾರಿ ಪರೀಕ್ಷೆ ನಡೆದ ಕೇಂದ್ರಗಳನ್ನು ಬದಲಾವಣೆ ಮಾಡುವ ಬಗ್ಗೆ ಕೂಡಾ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

- Advertisement -

Latest News

error: Content is protected !!