Tuesday, April 23, 2024
Homeತಾಜಾ ಸುದ್ದಿಇನ್ನು ಮುಂದೆ ನಾಡಗೀತೆ ಹಾಡುವ ಅವಧಿ 2 ನಿಮಿಷ, 30 ಸೆಕೆಂಡ್ : ಧಾಟಿ ಮತ್ತು...

ಇನ್ನು ಮುಂದೆ ನಾಡಗೀತೆ ಹಾಡುವ ಅವಧಿ 2 ನಿಮಿಷ, 30 ಸೆಕೆಂಡ್ : ಧಾಟಿ ಮತ್ತು ಅವಧಿ ಗೊಂದಲಕ್ಕೆ ಫುಲ್ ಸ್ಟಾಪ್

spot_img
- Advertisement -
- Advertisement -

ಬೆಂಗಳೂರು : ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ಧಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ಇದ್ದ ಗೊಂದಲಕ್ಕೆ ರಾಜ್ಯ ಸರಕಾರ ಇದೀಗ ಪೂರ್ಣ ವಿರಾಮ ಹಾಡಿದೆ.

ಖ್ಯಾತ ರಾಗ ಸಂಯೋಜಕ ದಿ. ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ಕುವೆಂಪು ವಿರಚಿತ ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ಈಗ ರಾಜ್ಯ ಸರಕಾರ ಸಮ್ಮತಿ ಸೂಚಿಸಿದೆ.

ಯಾವುದೇ ಆಲಾಪ ಹಾಗೂ ಪುನರಾವರ್ತನೆ ಇಲ್ಲದಂತೆ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆಯನ್ನು ಹಾಡಲು ಸಾಧ್ಯ ಎಂದು ತಜ್ಞರು ನೀಡಿದ ವರದಿ ಆಧರಿಸಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಹೀಗಾಗಿ ಇನ್ನು ಮುಂದೆ ರಾಷ್ಟ್ರಕವಿ ಕುವೆಂಪು ರಚಿಸಿರುವ ಜಯಭಾರತ ಜನನಿಯ ತನುಜಾತೆ ಕವನವು ನಾಡಗೀತೆಯಾಗಿ ಅಂಗೀಕೃತಗೊಂಡ ರೂಪದಲ್ಲೇ ಹಿಂದಿನ ಒಂದಕ್ಷರವನ್ನೂ ಬಿಡದಂತೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ ಧಾಟಿಯಲ್ಲೇ ಹಾಡಲಾಗುತ್ತದೆ ಎಂದು ಕನ್ನಡ – ಇಂಧನ ಮತ್ತು ಇಂಧನ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ನಾಡಗೀತೆಗೆ ಧಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ೨೦೦೫ ರಿಂದಲೂ ನೆನೆಗುದಿಗೆ ಬಿದ್ದಿತ್ತು.

ಕೆಲವು ಕಾರ್ಯಕ್ರಮಗಳಲ್ಲಿ ಏಳರಿಂದು ಎಂಟು ನಿಮಿಷಗಳ ಕಾಲ ನಾಡಗೀತೆ ಹಾಡುತ್ತಿದ್ದರು. ಇದು ಅಶಕ್ತರು, ವಿಕಲಚೇತನರಿಗೆ ಅನನುಕೂಲವಾಗುತ್ತಿತ್ತು. ಹೀಗಾಗಿ ಧಾಟಿ ಹಾಗೂ ಕಾಲ ಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂಬ ಒತ್ತಾಯ ಸರಕಾರದ ಮುಂದೆ ಇತ್ತು.

೨೦೦೬ ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ ಅವರ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಸರಕಾರ ಮತ್ತೊಂದು ಸಮಿತಿ ರಚನೆ ಮಾಡಿತ್ತು. ಆದರೆ ಈ ಸಮಿತಿಯ ಸದಸ್ಯರಲ್ಲೇ ಸ್ಪಷ್ಟತೆ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿ. ಸುನೀಲ್ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು.

ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.

- Advertisement -
spot_img

Latest News

error: Content is protected !!