Wednesday, June 26, 2024
Homeತಾಜಾ ಸುದ್ದಿಜೂನ್ 3 ರಂದು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು

ಜೂನ್ 3 ರಂದು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು

spot_img
- Advertisement -
- Advertisement -

ಬೆಂಗಳೂರು: ಜೂನ್ 3 ರಂದು ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ಮತದಾನಕ್ಕೆ ಅನುಕೂಲವಾಗುವಂತೆ ಮತದಾರರಾಗಿರುವ ಪದವೀಧರ ಮತ್ತು ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇತರ ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಆಗಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಮತ್ತು ಶಿಕ್ಷಕ ಮತದಾರರಿಗೆ ರಜೆ ಅನ್ವಯವಾಗಲಿದೆ.

ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ವಿಧಾನ ಪರಿಷತ್ ನ ಆರು ಕ್ಷೇತ್ರಗಳಿಗೆ ಜೂನ್ ಮೂರರಂದು ಮತದಾನ ನಡೆಯಲಿದೆ.

- Advertisement -
spot_img

Latest News

error: Content is protected !!