Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ; ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ; ರಾಜ್ಯ ಸರ್ಕಾರದಿಂದ ಸುತ್ತೋಲೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ತ್ರಿಭಾಷಾ ಸೂತ್ರದ ಹೇರಿಕೆ ಆರೋಪದ ನಡುವೆಯೇ ಫೆಬ್ರವರಿ 15 ರಂದು ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಈ ಆದೇಶ ಹೊರಡಿಸಿದೆ.

ಒಂದು ಭಾಷೆಯ ಬೆಳವಣಿಗೆ ಆಗಬೇಕಿದ್ದರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು, ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

- Advertisement -

Latest News

error: Content is protected !!