Saturday, June 6, 2026
Homeತಾಜಾ ಸುದ್ದಿಮದರಸಾಗಳ ಮೇಲೆ ಕಣ್ಣಿಟ್ಟ ರಾಜ್ಯ ಸರ್ಕಾರ: ಯುಪಿ ಮಾದರಿಯಲ್ಲೇ ಕರ್ನಾಟಕದಲ್ಲೂ ಕ್ರಮ ಜಾರಿಯಾಗುವ ಸಾಧ್ಯತೆ

ಮದರಸಾಗಳ ಮೇಲೆ ಕಣ್ಣಿಟ್ಟ ರಾಜ್ಯ ಸರ್ಕಾರ: ಯುಪಿ ಮಾದರಿಯಲ್ಲೇ ಕರ್ನಾಟಕದಲ್ಲೂ ಕ್ರಮ ಜಾರಿಯಾಗುವ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಸಮಿತಿಯು ಮದರಸಾಗಳ ಕಂಪ್ಲೀಟ್ ಚಟುವಟಿಕೆ ಕುರಿತು ವರದಿ ನೀಡಲಿದೆ.

ವರದಿ ಬಳಿಕ ಮದರಸಾಗಳ ಬ್ಯಾನ್ ಮಾಡಬೇಕಾ ಅಥವಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡಿಸಬೇಕಾ ಅಂತಾ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಮದರಸಾಗಳ ವಿರುದ್ಧ ಕ್ರಮ ಜಾರಿಯಾಗುವ ಸಾಧ್ಯತೆಯಿದೆ.

- Advertisement -

Latest News

error: Content is protected !!