- Advertisement -
- Advertisement -
ಬೆಂಗಳೂರು: ನಿನ್ನೆ ನಿಧನರಾದ ಸಾಹಿತಿ ನಾ ಡಿಸೋಜ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.ನಾರ್ಬಟ್ ಡಿಸೋಜ ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರು. ಶಿವಮೊಗ್ಗ ಜಿಲ್ಲೆಯ ಇವರು ದಿನಾಂಕ 05-01-2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ಇನ್ನೂ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- Advertisement -