Wednesday, May 8, 2024
Homeಕರಾವಳಿಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಪ್ರವೇಶಕ್ಕೆ ರಾಷ್ಟ್ರ ಮಟ್ಟದ ಸಿಇಟಿ ನಡೆಸಲು ರಾಜ್ಯ ಸರ್ಕಾರ ಸಿದ್ಧ: ಉನ್ನತ...

ಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಪ್ರವೇಶಕ್ಕೆ ರಾಷ್ಟ್ರ ಮಟ್ಟದ ಸಿಇಟಿ ನಡೆಸಲು ರಾಜ್ಯ ಸರ್ಕಾರ ಸಿದ್ಧ: ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಪ್ರಸ್ತಾಪ

spot_img
- Advertisement -
- Advertisement -

ಬೆಂಗಳೂರು:ರಾಜ್ಯದ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳು, ತಮ್ಮ ಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಸದ್ಯ ಪ್ರತ್ಯೇಕವಾದಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಹೀಗಾಗಿ ಎಲ್ಲ ವಿವಿಗಳೂ ಒಪ್ಪುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ರಾಷ್ಟ್ರ ಮಟ್ಟದಲ್ಲಿ ಸಿಇಟಿ) ನಡೆಸಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಎಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಾಧಿಪತಿಗಳು ಮತ್ತು ರಿಜಿಸ್ಟ್ರಾರ್ ಗಳ ಸಭೆಯಲ್ಲಿ ಸಚಿವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.

ಸರ್ಕಾರಿ ಕೋಟಾದ ಎಂಜಿನಿಯರಿಂಗ್ ಸೀಟುಗಳನ್ನು ಸಿಇಟಿ ರ್ಯಾಂಕ್ ಮೇಲೆ ಖಾಸಗಿ ವಿವಿಗಳು ಭರ್ತಿ ಮಾಡಿಕೊಳ್ಳುತ್ತಿವೆ. ಆದರೆ, ಶೇಕಡಾ 60ರಷ್ಟು ಮ್ಯಾನೇಜ್‍ಮೆಂಟ್ ಸೀಟುಗಳನ್ನು ತಮ್ಮದೇ ಪ್ರತ್ಯೇಕ ಸಿಇಟಿ ಮೂಲಕ ವಿವಿಗಳು ಭರ್ತಿ ಮಾಡಿಕೊಳ್ಳುತ್ತಿವೆ. ಈ ರೀತಿ ಪ್ರತ್ಯೇಕ ಸಿಇಟಿಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಇದರ ಜತೆಗೆ ಒಂದೇ ಸಿಇಟಿ ಮಾಡಿ ಎನ್ನುವ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ಕೂಡ ವ್ಯಕ್ತಪಡಿಸಿದೆ. ಹೀಗಾಗಿ ನೀವೇ ಬೇಕಾದರೆ ಎಲ್ಲ ವಿವಿಗಳು ಸೇರಿಕೊಂಡು ಪ್ರತ್ಯೇಕ ಸಿಇಟಿ ಮಾಡಿಕೊಳ್ಳಿ ಎಂದು ಸಚಿವರು ಸಲಹೆ ನೀಡಿದರು.

ಸದ್ಯದಲ್ಲೇ ಈ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸುವಂತೆಯೂ ಸಚಿವರು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ ಅವರಿಗೆ ಸೂಚಿಸಿದರು.

ಇದೇ ವೇಳೆ ಕೆಲವು ವಿಶ್ವವಿದ್ಯಾಲಯಗಳು ಸರ್ಕಾರಿ ಕೋಟಾದ ಸೀಟುಗಳಿಗೆ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಚಿವರು ಎಚ್ಚರಿಕೆ ನೀಡಿದರು.

- Advertisement -
spot_img

Latest News

error: Content is protected !!