Saturday, November 28, 2026
Homeಕರಾವಳಿನ.30ರಂದು ರಾಜ್ಯ ಸರ್ಕಾರದ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ; 11 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ

ನ.30ರಂದು ರಾಜ್ಯ ಸರ್ಕಾರದ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ; 11 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ

- Advertisement -
- Advertisement -

ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಆವರಣದಲ್ಲಿ ನವೆಂಬರ್ 30ರಂದು ರಾಜ್ಯ ಸರ್ಕಾರದ ವತಿಯಿಂದ ನಡೆಯಲಿರುವ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಮೇಳದಲ್ಲಿ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 11 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವವರು ಈ ಮೇಳದಲ್ಲಿ ಭಾಗವಹಿಸಬಹುದು. ಹೊಸದಾಗಿ ಪದವಿ ಪಡೆದ ಅಭ್ಯರ್ಥಿಗಳ ಜೊತೆಗೆ ಕೆಲಸದ ಅನುಭವ ಹೊಂದಿರುವವರಿಗೂ ಅವಕಾಶವಿದೆ.

ಇದೇ ಸಂದರ್ಭದಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ಸಹಾಯವಾಗುವ ‘ಕೆರಿಯರ್ ಪಾತ್ ವೇ’ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಉಮರ್ ಹಾಗೂ ಚಂದ್ರಕಲಾ ಉಪಸ್ಥಿತರಿದ್ದರು.

- Advertisement -

Latest News

error: Content is protected !!