Monday, May 20, 2024
Homeಕರಾವಳಿಉಡುಪಿಸಿನಿಮಾ ಚಿತ್ರೀಕರಣಕ್ಕೆ ಹೊಸ ನಿಯಮಗಳ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

ಸಿನಿಮಾ ಚಿತ್ರೀಕರಣಕ್ಕೆ ಹೊಸ ನಿಯಮಗಳ ಜಾರಿಗೆ ಮುಂದಾದ ರಾಜ್ಯ ಸರ್ಕಾರ!

spot_img
- Advertisement -
- Advertisement -

ಬೆಂಗಳೂರು : ಚಲನಚಿತ್ರ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ನಾಳೆಯಿಂದಲೇ ಚಿತ್ರೀಕರಣಕ್ಕೆ ಹೊಸ ನಿಯಮಗಳನ್ನು ಜಾರಿ ಮಾಡಲು ಮುಂದಾಗಿದ್ದು, ಇನ್ನು ಮುಂದೆ ರಾಜ್ಯ ಸರ್ಕಾರದ ಅನುಮತಿ ಪಡೆಯದೇ ಚಿತ್ರೀಕರಣ ಮಾಡುವುದಕ್ಕೆ ನಿರ್ಬಂದ ಹಾಕಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಚಿತ್ರೀಕರಣ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುತ್ತೇವೆ. ನಾಳೆ ಅಥವಾ ನಾಡಿದ್ದು ಆದೇಶವನ್ನು ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಎಲ್ಲಿಯೇ ಶೂಟಿಂಗ್ ಮಾಡಬೇಕಾದರು ಸಂಬಂಧಪಟ್ಟವರ ಅನುಮತಿಯನ್ನು ಕಡ್ಡಾಯವಾಗಿ ಪಡೆಯಲೇಬೇಕು ಹಾಗೂ ಒಂದು ವೇಳೆ ಅನುಮತಿ ಪಡೆಯದೇ ಚಿತ್ರೀಕರಣ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಈಗಾಗಲೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದ್ದು ಹೊಸ ನಿಯಮಗಳನ್ನು ಸಿದ್ದಪಡಿಸುವಂತೆ ಸೂಚಿಸಲಾಗಿದೆ.ಚಿತ್ರೀಕರಣದ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಆದರೆ ಕೆಲವರು ಇದನ್ನು ಪಾಲಿಸುತ್ತಿಲ್ಲ. ಹೀಗಾಗಿ ಆಗಿಂದಾಗ್ಗೆ ಇಂತಹ ಅವಘಡಗಳು ಸಂಭವಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದರು.

ಇನ್ನು ಈ ಪ್ರಕರಣಕೆ ಸಂಬಂಧಿಸಿ ಬಿಡದಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಐವರ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ. ನಿರ್ದೇಶಕ ಶಂಕರ್ ರಾಜ್ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಆದರೆ ಘಟನೆ ಬಳಿಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದು, ಬಿಡದಿ ಪೊಲೀಸರು ಹುಡುಕುತ್ತಿದ್ದಾರೆ.

- Advertisement -
spot_img

Latest News

error: Content is protected !!