Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ಅತಿವೃಷ್ಟಿ ಹಿನ್ನೆಲೆ: 2-3 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ‌ಮನವಿ ಸಲ್ಲಿಸಲಿರುವ ರಾಜ್ಯ...

ರಾಜ್ಯದಲ್ಲಿ ಅತಿವೃಷ್ಟಿ ಹಿನ್ನೆಲೆ: 2-3 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ‌ಮನವಿ ಸಲ್ಲಿಸಲಿರುವ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅತಿವೃಷ್ಟಿಗೆ ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಕೂಡಾ ಸಿಎಂ ಬೊಮ್ಮಾಯಿ‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ‌ ಇಂದು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ‌, ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ ೫೦೦ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸಾಕಷ್ಟು ಬೆಳೆ ಹಾನಿಯಾಗಿದ್ದು, ಅದರ ಸಮೀಕ್ಷಾ ವರದಿ ಬಂದ ಕೂಡಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ‌

- Advertisement -

Latest News

error: Content is protected !!