Thursday, June 4, 2026
Homeತಾಜಾ ಸುದ್ದಿಹಿಂದೂ ದೇಗುಲದ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಮಹತ್ವದ...

ಹಿಂದೂ ದೇಗುಲದ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ನೀಡುವಂತಿಲ್ಲ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

- Advertisement -
- Advertisement -

ಬೆಂಗಳೂರು : ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಹೌದು, ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಪೂಜಾರಿ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ದೇವಾಲಯಗಳು ಮತ್ತು ಧಾರ್ಮಿಕ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಚರ್ಚೆ ಬೆನ್ನಲ್ಲೇ ಸರ್ಕಾರ ತೀರ್ಮಾನ ಕೈಗೊಂಡಿದೆ. ರಾಜ್ಯದ 757 ಪ್ರಾರ್ಥನಾ ಕೇಂದ್ರ ಹಾಗೂ 111 ವರ್ಷಾಸನ ನಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದು ಸರ್ಕಾರ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!