Friday, October 4, 2024
Homeತಾಜಾ ಸುದ್ದಿಮಸೀದಿ ಬಳಿ ಹಿಂದೂಗಳ ಮೆರವಣಿಗೆ ಹೋಗಬಾರದು ಎನ್ನಲು ರಾಜ್ಯ ಇಸ್ಲಾಮಿಕ್ ರಿಪಬ್ಲಿಕ್ಕಾ; ಆರ್‌.ಅಶೋಕ 

ಮಸೀದಿ ಬಳಿ ಹಿಂದೂಗಳ ಮೆರವಣಿಗೆ ಹೋಗಬಾರದು ಎನ್ನಲು ರಾಜ್ಯ ಇಸ್ಲಾಮಿಕ್ ರಿಪಬ್ಲಿಕ್ಕಾ; ಆರ್‌.ಅಶೋಕ 

spot_img
- Advertisement -
- Advertisement -

ಬೆಂಗಳೂರು: ಹಿಂದೂಗಳ ವಿರುದ್ಧ ನಾಗಮಂಗಲದಲ್ಲಿ ಮುಸ್ಲಿಂ ಮತಾಂಧರನ್ನು ಓಲೈಸಲು ತಪ್ಪು ಎಫ್‌ಐಆರ್‌ ದಾಖಲಿಸಲು ಕಾರಣರಾದ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕೆಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಎಚ್ಚರಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಮಾತ್ರ ಟಾರ್ಗೆಟ್ ಮಾಡುವ ಹುನ್ನಾರ ಕೈ ಬಿಡದಿದ್ದರೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

https://x.com/RAshokaBJP/status/1834494222629470527

ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲು ಸಿದ್ಧವಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್‌ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ, ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಕೊಟ್ಟುಕೊಂಡು ಸಂಪೂರ್ಣ ಪೂರ್ವ ನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ ಎಂದರು.

ಇನ್ನು ಈ ವಿಚಾರವೂ ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲು ಸಿದ್ಧ ಎಂದು ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -
spot_img

Latest News

error: Content is protected !!