- Advertisement -
- Advertisement -
ಬೆಳ್ತಂಗಡಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯ 2021 -22 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಆಯ್ಕೆಯಾಗಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಗ್ರಾಮದಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ. ಮಾ 14 ರಂದು ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂಜೆ 3:30 ಗಂಟೆಗೆ ನಡೆಯುವ ರಾಜ್ಯ ಮಟ್ಟದ “ನರೇಗಾ ಹಬ್ಬ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.
- Advertisement -
