Friday, June 5, 2026
Homeಕರಾವಳಿಕರಾವಳಿಯ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಕರಾವಳಿಯ ಮೂವರು ಶಿಕ್ಷಕರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

- Advertisement -
- Advertisement -

ಬೆಂಗಳೂರು: ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಂಗಳೂರಿನಲ್ಲ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಶಸ್ತಿ ಪ್ರದಾನ ಮಾಡಿದರು‌.

ಬೆಳ್ತಂಗಡಿ ತಾಲೂಕಿನ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ಮತ್ತು ಕಾರ್ಕಳ ತಾಲೂಕಿನ ಕೆರ್ವಾಶೆಯ ಮಿಯೂರು ಬಂಗ್ಲೆಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಅವರಿಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕ ಟಿ. ರಾಧಾಕೃಷ್ಣ‌ ಅವರು ಪ್ರೌಢಶಾಲಾ ವಿಭಾಗದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದರು.

- Advertisement -

Latest News

error: Content is protected !!