Wednesday, July 15, 2026
Homeಕರಾವಳಿಫೆಬ್ರವರಿ ತಿಂಗಳಿನಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಗೇರು ಮೇಳ: ಸಚಿವ ಈಶ್ವರ ಬಿ.ಖಂಡ್ರೆ

ಫೆಬ್ರವರಿ ತಿಂಗಳಿನಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಗೇರು ಮೇಳ: ಸಚಿವ ಈಶ್ವರ ಬಿ.ಖಂಡ್ರೆ

- Advertisement -
- Advertisement -

ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಧಿಕ ಗೇರು ಬೆಳೆಯಲಾಗುತ್ತಿದ್ದು, ಇಲ್ಲಿನ ಗೇರು ಸಸಿಗಳಿಗೆ ಹೆಚ್ಚು ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದ್ದಾರೆ.

ಕರಾವಳಿಯ ಗೇರು ಬೆಳೆಗಾರರನ್ನು ಪ್ರೋತ್ಸಾಹಿಸಲು ಮಂಗಳೂರಿನಲ್ಲಿ ಗೇರು ಮೇಳ ಆಯೋಜಿಸಲಾಗುತ್ತಿದೆ. ಗೇರು ಬೆಳೆಗಾರರು, ಗೇರು ಉದ್ಯಮದವರನ್ನು ಒಂದೆಡೆ ಸೇರಿಸಿ ಗೇರು ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸಲಾಗುತ್ತದೆ. ಗೇರು ಮೇಳದಲ್ಲಿ ಉತ್ಪನ್ನಗಳ ಪ್ರದರ್ಶನ, ವಿಚಾರ ಸಂಕಿರಣ ಸಹಿತ ವಿವಿಧ ಆಯಾಮಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಗೇರು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ದೊರಕುವಂತಾಗಲು ಇಲಾಖೆಯು ಕ್ರಮ ಕೈಗೊಳ್ಳಲಿದೆ. ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಎಲ್ಲ ರೀತಿಯ ಸಂಶೋಧನೆ, ಬೆಲೆ ವಿಸ್ತರಣೆ ಮತ್ತಿತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಸಚಿವ ರಮಾನಾಥ ರೈ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಸಿಸಿಎಫ್‌ ಕರಿಕಲನ್‌ ಉಪಸ್ಥಿತರಿದ್ದರು.

- Advertisement -

Latest News

error: Content is protected !!