Thursday, June 4, 2026
Homeತಾಜಾ ಸುದ್ದಿರಾಜ್ಯಮಟ್ಟದ ನರೇಗಾ ಹಬ್ಬ- ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರರಿಗೆ ಪ್ರಶಸ್ತಿ...

ರಾಜ್ಯಮಟ್ಟದ ನರೇಗಾ ಹಬ್ಬ- ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರರಿಗೆ ಪ್ರಶಸ್ತಿ ಪ್ರದಾನ

- Advertisement -
- Advertisement -

ಬೆಂಗಳೂರು: 2021-22ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ರಾಜ್ಯಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಆಯ್ಕೆಯಾಗಿದ್ದರು. ಅವರಿಗೆ ಮಾ.14 ರಂದು ಬೆಂಗಳೂರಿನ ವಿಧಾನ ಸೌಧದ ಬ್ವಾಂಕ್ವೆಟ್ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಖಂಡಿಗ, ಬಾಲಕೃಷ್ಣ ಗೌಡ, ಚೇತನ್, ಊರಿನ ಪ್ರಮುಖರಾದ ಪ್ರಶಾಂತ್ , ಗಿರೀಶ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!