Sunday, June 7, 2026
Homeಕರಾವಳಿರಾಜ್ಯ ಮಟ್ಟದ ಭಾಷಣ ಸ್ಪರ್ಧೆ : ಕಡಬದ ಸಮ್ಯಕ್ತ್ ಜೈನ್ ತೃತೀಯ

ರಾಜ್ಯ ಮಟ್ಟದ ಭಾಷಣ ಸ್ಪರ್ಧೆ : ಕಡಬದ ಸಮ್ಯಕ್ತ್ ಜೈನ್ ತೃತೀಯ

- Advertisement -
- Advertisement -

ಕಡಬ:75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಇದರಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಸಮ್ಯಕ್ತ್ ಜೈನ್ ರವರು ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಕಾರ್ಯಕ್ರಮದ ನಿರೂಪಕರಾಗಿ,ಕವಿ ,ಸಾಹಿತಿ ,ವಾಗ್ಮಿಯಾಗಿ ಹಾಗೂ ಅಭಿನಯಕಾರರಾಗಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರ.

- Advertisement -

Latest News

error: Content is protected !!