Friday, September 11, 2026
Homeಕರಾವಳಿಮಂಗಳೂರಿನಲ್ಲಿ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ ಆರಂಭ

ಮಂಗಳೂರಿನಲ್ಲಿ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ ಆರಂಭ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಯು ಕೊಟ್ಟಾರದ ಪಡುಕೋಡಿಯಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಅದ್ಧೂರಿಯಾಗಿ ಆರಂಭಗೊಂಡಿತು.

ಟೂರ್ನಿಯ ಮೊದಲ ದಿನವಾದ ಬುಧವಾರ ಮಹಿಳೆಯರ ಸಿಂಗಲ್ಸ್ ಪಂದ್ಯಗಳಿಗೆ ಚಾಲನೆ ನೀಡಲಾಯಿತು. ಇದರ ಬೆನ್ನಲ್ಲೇ 19 ವರ್ಷದೊಳಗಿನ ಬಾಲಕ-ಬಾಲಕಿಯರ ವಿಭಾಗ, ಪುರುಷರ ಸಿಂಗಲ್ಸ್ ಹಾಗೂ ನಾನ್-ಮೆಡಲಿಸ್ಟ್ ಸಿಂಗಲ್ಸ್ ವಿಭಾಗದ ರೋಮಾಂಚಕ ಪಂದ್ಯಗಳು ಜರುಗಿದವು.

ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

- Advertisement -

Latest News

error: Content is protected !!