Thursday, June 4, 2026
Homeಕರಾವಳಿ2022-23ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಮತ್ತು ಕಾರ್ಕಳ...

2022-23ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಮತ್ತು ಕಾರ್ಕಳ ತಾಲೂಕಿನ ಒಬ್ಬರು ಶಿಕ್ಷಕರಿಗೆ ಪ್ರಶಸ್ತಿ

- Advertisement -
- Advertisement -

ಬೆಂಗಳೂರು : 2022-23ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ 20, ಪ್ರೌಢಶಾಲಾ ಶಾಲಾ ವಿಭಾಗದಲ್ಲಿ 11 ಶಿಕ್ಷಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಬೆಳ್ತಂಗಡಿ ತಾಲೂಕಿನ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ಮತ್ತು ಕಾರ್ಕಳ ತಾಲೂಕಿನ ಕೆರ್ವಾಶೆಯ ಮಿಯೂರು ಬಂಗ್ಲೆಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಅವರಿಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕ ಟಿ. ರಾಧಾಕೃಷ್ಣ‌ ಅವರಿಗೆ ಪ್ರೌಢಶಾಲಾ ವಿಭಾಗದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.

ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಲ್ಪಡುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ‌ ಮಾಡಲಾಗುತ್ತದೆ.

- Advertisement -

Latest News

error: Content is protected !!