Monday, May 20, 2024
HomeUncategorizedಮಂಗಳೂರಿನ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ; ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳ್ಳಗೆ ಶಾಕ್ ನೀಡಿದ ಲೋಕಾಯುಕ್ತ

ಮಂಗಳೂರಿನ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ; ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳ್ಳಗೆ ಶಾಕ್ ನೀಡಿದ ಲೋಕಾಯುಕ್ತ

spot_img
- Advertisement -
- Advertisement -

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮಂಗಳೂರು, ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ.

ಮಂಗಳೂರಿನ ಅತ್ತಾವರ ವಿಭಾಗದಲ್ಲಿ ಮೆಸ್ಕಾಂ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇ.ಇ ಶಾಂತಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಮಂಗಳೂರಿನ ಮನೆ, ಬೆಂಗಳೂರಿನ ಮನೆ ಹಾಗೂ ಅವರ ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. 

ಕಳೆದ ಐದಾರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರು ತಮ್ಮ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಲೋಕಾಯಕ್ತ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆಯ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದು, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಜಿನಿಯರ್ ಹನುಮಂತರಾಯಪ್ಪ, ಲೋಕೋಪಯೋಗಿ ಇಲಾಖೆಯ ಮಂಡ್ಯ ವಿಭಾಗದ ಎಂಜಿನಿಯರ್ ಹರ್ಷ, ಚಿಕ್ಕಮಗಳೂರಿನ ವಾಣಿಜ್ಯ ತೆರಿಗೆ ಅಧಿಕಾರಿ ನೇತ್ರಾವತಿ, ಹಾಸನದ ಆಹಾರ ನಿರೀಕ್ಷಕ ಜಗನ್ನಾಥ್ ಜಿ., ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿ ರೇಣುಕಮ್ಮ, ಚಾಮರಾಜನಗರದ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಪಿ. ರವಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಯಜೇಂದ್ರ, ಬಳ್ಳಾರಿಯ ಸಹಾಯಕ ಪ್ರಾಧ್ಯಾಪಕ ಬಿ. ರವಿ, ವಿಜಯನಗರ ಜಿಲ್ಲೆಯ ಇಂಧನ ಇಲಾಖೆ ಅಧಿಕಾರಿ ಭಾಸ್ಕರ್ ಮತ್ತು ಮಂಗಳೂರಿನ ಮೆಸ್ಕಾಂ ಅಧಿಕಾರಿ ಶಾಂತಕುಮಾರ್ ಅವರಿಗೆ ಸಂಬಂಧಿಸಿದ 40 ಸ್ಥಳಗಳ ಮೇಲೆ ಬುಧವಾರ ನಸುಕಿನಲ್ಲಿ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಅವರ ಮನೆ ಮೇಲೆಯೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

- Advertisement -
spot_img

Latest News

error: Content is protected !!