Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ: ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ: ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಹುಬ್ಬಳ್ಳಿ: ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ರಾಜ್ಯದಲ್ಲಿ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬಸವರಾಜ ಬೊಮ್ಮಾಯಿ ಈ ಹೇಳಿಕೆ ನೀಡಿದ್ದಾರೆ.

ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ‌.

ದೇಶದಲ್ಲಿ ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ನಿರ್ದೇಶನ ನೀಡಿತ್ತು.

- Advertisement -

Latest News

error: Content is protected !!