Sunday, April 28, 2024
Homeತಾಜಾ ಸುದ್ದಿರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನ ನಡೆಯಲಿದೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ.

ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶ ಈ ಏಕಕಾಲದ ಜನತಾ ದರ್ಶನದ ಹಿಂದಿದೆ.

ಆಡಳಿತಕ್ಕೆ ಚುರುಕು ಮುಟ್ಟಿಸಿ ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನು ನೀಡಿದ್ದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳ ಮೇಲೆ ಇರುತ್ತದೆ.

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ ಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ.

ಇಋ ಜೊತೆಗೆ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!