Wednesday, June 3, 2026
Homeಕರಾವಳಿಕಡಬ ಆ್ಯಸಿಡ್ ದಾಳಿ ಪ್ರಕರಣ; ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ರಾಜ್ಯ ಮಹಿಳಾ ಆಯೋಗ

ಕಡಬ ಆ್ಯಸಿಡ್ ದಾಳಿ ಪ್ರಕರಣ; ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ರಾಜ್ಯ ಮಹಿಳಾ ಆಯೋಗ

- Advertisement -
- Advertisement -

ಮಂಗಳೂರು: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ್ಯಸಿಡ್ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಇಂದು ರಾಜ್ಯ ಮಹಿಳಾ ಆಯೋಗ ಭೇಟಿ ಮಾಡಿದೆ.

ವಿದ್ಯಾರ್ಥಿನಿಯರು ದಾಖಲಾಗಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಸಂತ್ರಸ್ಥ ವಿದ್ಯಾರ್ಥಿನಿಯರಿಂದ ಘಟನೆಯ ಬಗ್ಗೆ ನಾಗಲಕ್ಷ್ಮೀ ಚೌಧರಿ ಮಾಹಿತಿ ಪಡೆದಿದ್ದು, ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಹೇಳಿದ್ದಾರೆ‌.

ನಿನ್ನೆ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಆರೋಪಿ ಅಬಿನ್ ಆ್ಯಸಿಡ್ ಎರಚಿದ್ದನು.

- Advertisement -

Latest News

error: Content is protected !!