Saturday, May 18, 2024
Homeತಾಜಾ ಸುದ್ದಿಮಂಗಳೂರು: ಹೈಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿದ್ದೇವೆ: ರಾತ್ರೋರಾತ್ರಿ ಈ ಸಮಸ್ಯೆ ಶುರುವಾಗಿದೆ: ವಿದ್ಯಾರ್ಥಿನಿ ಗೌಸಿಯಾ...

ಮಂಗಳೂರು: ಹೈಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿದ್ದೇವೆ: ರಾತ್ರೋರಾತ್ರಿ ಈ ಸಮಸ್ಯೆ ಶುರುವಾಗಿದೆ: ವಿದ್ಯಾರ್ಥಿನಿ ಗೌಸಿಯಾ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೋ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದೀಗ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಹೈಕೋರ್ಟ್ ಆದೇಶದ ಬಳಿಕವೂ ನಾವು ಹಿಜಾಬ್ ಹಾಕಿಕೊಂಡು ಹೋಗಿದ್ದೇವೆ. ಆದರೆ, ಕೆಲ ದಿನಗಳ ಬಳಿಕ ರಾತ್ರೋರಾತ್ರಿ ಈ ಸಮಸ್ಯೆ ಆರಂಭವಾಗಿದೆ ಎಂದು ಹೇಳಿದರು.

ಮಂಗಳೂರು ವಿವಿ ಘಟಕ ಕಾಲೇಜು ಹಿಜಾಬ್ ವಿವಾದ ಸಂಬಂಧ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದ್ರು. ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿನಿ ಗೌಸಿಯಾ ಮಾತನಾಡಿ, ಈ ಹಿಂದೆ ವಿವಿ ಕಾಲೇಜಿನಲ್ಲಿ ಯಾವುದೇ ಹಿಜಾಬ್ ಸಮಸ್ಯೆ ಇರಲಿಲ್ಲ. ಹೈಕೋರ್ಟ್ ಆದೇಶದ ಬಳಿಕವೂ ನಾವು ಹಿಜಾಬ್ ಹಾಕಿಕೊಂಡು ಹೋಗಿದ್ದೇವೆ. ಆದರೆ, ಕೆಲ ದಿನಗಳ ಬಳಿಕ ರಾತ್ರೋರಾತ್ರಿ ಈ ಸಮಸ್ಯೆ ಆರಂಭವಾಗಿದೆ ಎಂದರು.

ಈ ವಿಚಾರದಲ್ಲಿ ಹಲವು ಬಾರಿ ವಿವಿ ಕುಲಪತಿ ಅವರನ್ನು ಸಂಪರ್ಕಿಸಿದ್ದೆವು. ಈ ವೇಳೆ ಕುಲಪತಿಯವರು ಡಿಸಿ ಬಳಿ ಕೋರ್ಟ್ ಆದೇಶದ ಸ್ಪಷ್ಟನೆ ಪತ್ರವನ್ನು ತರುವಂತೆ ತಿಳಿಸಿದ್ದರು. ಬಳಿಕ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಲು ಯತ್ನಿಸಿದೆವು. ಆ ಬಳಿಕ ಮತ್ತೆ ಕಾಲೇಜಿಗೆ ಹೋದಾಗ ನಮ್ಮನ್ನ ಹೊರಗೆ ಹಾಕಿದ್ದಾರೆ ಎಂದು ತಿಳಿಸಿದ್ರು.

ಈ ವಿಚಾರದಲ್ಲಿ ಹಲವು ಬಾರಿ ವಿವಿ ಕುಲಪತಿ ಅವರನ್ನು ಸಂಪರ್ಕಿಸಿದ್ದೆವು. ಈ ವೇಳೆ ಕುಲಪತಿಯವರು ಡಿಸಿ ಬಳಿ ಕೋರ್ಟ್ ಆದೇಶದ ಸ್ಪಷ್ಟನೆ ಪತ್ರವನ್ನು ತರುವಂತೆ ತಿಳಿಸಿದ್ದರು. ಬಳಿಕ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಲು ಯತ್ನಿಸಿದೆವು. ಆ ಬಳಿಕ ಮತ್ತೆ ಕಾಲೇಜಿಗೆ ಹೋದಾಗ ನಮ್ಮನ್ನ ಹೊರಗೆ ಹಾಕಿದ್ದಾರೆ ಎಂದು ತಿಳಿಸಿದ್ರು.

ಇನ್ನು ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುವ ಬೆದರಿಕೆ ಹಾಕಿದ್ದರು. ಈ ವೇಳೆ ಪ್ರಾಂಶುಪಾಲರು ಹಿಜಾಬ್ ಧಾರಿ ವಿದ್ಯಾರ್ಥಿನಿಯರನ್ನು ಪ್ರವೇಶ ನಿರ್ಬಂಧ ಮಾಡಿ ಆದೇಶ ಮಾಡಿದ್ರು. ಹೀಗಾಗಿ ನಾವು ಹೊರಗೆ ಕೂರಬೇಕಾಯಿತು. ಹಿಜಾಬ್ ಧರಿಸಿ ಕ್ಯಾಂಪಸ್ ಪ್ರವೇಶಕ್ಕೂ ಅನುಮತಿ ನಿರಾಕರಿಸಲಾಯ್ತು. ಎಬಿವಿಪಿ ಪ್ರತಿಭಟನೆ ಬಳಿಕ ಕ್ಯಾಂಪಸ್ ನಿಂದಲೂ ಹೊರಗೆ ಹಾಕಿದ್ರು ಎಂದು ವಿದ್ಯಾರ್ಥಿನಿ ಗೌಸಿಯಾ ಹೇಳಿದ್ರು. ಇನ್ನು, ಈ ಸಂಬಂಧ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲಾಯಿತು. ನಮ್ಮ ಜೊತೆಗೆ ಪೋಷಕರು ಕೂಡ ಮನವಿ ಮಾಡಿದ್ದಾರೆ. ದಯವಿಟ್ಟು, ಕಾಲೇಜಿನ ಹಳೆಯ ವಸ್ತ್ರ ಸಂಹಿತೆ ಮುಂದುವರೆಸಿ. ನಾವು ಹಿಂದಿನಿಂದಲೂ ಸಮವಸ್ತ್ರದ ಶಾಲನ್ನು ಹಿಜಾಬ್ ಆಗಿ ಧರಿಸಿ ಬರ್ತಾ ಇದ್ದೇವೆ ಎಂದು ಮನವಿ ಮಾಡಿರುವುದಾಗಿ ಅವರು ತಿಳಿಸಿದ್ರು. ಇನ್ನು, ಕಾಲೇಜಿನ ಈ ಆದೇಶದ ಹಿಂದೆ ಹೈಕೋರ್ಟ್ ಆದೇಶ ಇಲ್ಲ. ಬದಲಾಗಿ ಎಬಿವಿಪಿ ಒತ್ತಡಕ್ಕೆ ಬಿದ್ದು ಈ ಆದೇಶ ಹೊರಡಿಸುತ್ತಿದ್ದಾರೆ. ಇದರ ಬಗ್ಗೆ ಕಾನೂನು ಹೋರಾಟ ಮಾಡಿದ್ರೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಪ್ರಾಂಶುಪಾಲರು ಶಿರವಸ್ತ್ರ ತೆಗೆಯುವ ಯಾವುದೇ ಉದ್ದೇಶ ಇಲ್ಲ ಎಂದಿದ್ದಾರೆ. ಆದರೆ, ಎಬಿವಿಪಿ ಒತ್ತಡದಿಂದಲೇ ಪ್ರಾಂಶುಪಾಲರು ಈ ಆದೇಶ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ರು


- Advertisement -
spot_img

Latest News

error: Content is protected !!