Wednesday, June 19, 2024
Homeಕರಾವಳಿಮಂಗಳೂರುಮಂಗಳೂರು:ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣಾ ರಥಯಾತ್ರೆ

ಮಂಗಳೂರು:ಸೆಪ್ಟೆಂಬರ್ 25 ರಿಂದ ರಾಜ್ಯಾದ್ಯಂತ ಶೌರ್ಯ ಜಾಗರಣಾ ರಥಯಾತ್ರೆ

spot_img
- Advertisement -
- Advertisement -

ಮಂಗಳೂರು: ರಾಜ್ಯಾದ್ಯಂತ ಶೌರ್ಯ ಜಾಗರಣಾ ಯಾತ್ರೆ ನಡೆಸಲು ವಿಶ್ವ ಹಿಂದೂ ಪರಿಷತ್ ಮುಂದಾಗಿದೆ.

ಗೋ ಹತ್ಯೆ, ಮತಾಂತರ ಮತ್ತು ಲವ್ ಜಿಹಾದ್ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣಾ ರಥಯಾತ್ರೆ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2 ಸಾವಿರದಷ್ಟು ಇರುವ ಬಜರಂಗದಳ ಘಟಕಗಳನ್ನು 5 ಸಾವಿರಕ್ಕೆ ಏರಿಸುವುದು,ಹಿಂದೂ ದೇವಾಲಯಗಳು ಮತ್ತು ಶ್ರದ್ಧಾ ಕೇಂದ್ರಗಳನ್ನು ಉಳಿಸುವ ಉದ್ದೇಶ ಕೂಡಾ ಶೌರ್ಯ ರಥಯಾತ್ರೆಯಲ್ಲಿ ಇದೆ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಸೆಪ್ಟೆಂಬರ್ 25 ರಂದು ಚಿತ್ರದುರ್ಗದಲ್ಲಿ ಶೌರ್ಯ ಜಾಗರಣಾ ರಥಯಾತ್ರೆಗೆ ಚಾಲನೆ ದೊರೆಯಲಿದ್ದು
ಅಕ್ಟೋಬರ್ 10 ರಂದು ಉಡುಪಿಯಲ್ಲಿ ಯಾತ್ರೆ ಸಮಾರೋಪಗೊಳ್ಳಲಿದೆ.

- Advertisement -
spot_img

Latest News

error: Content is protected !!