Monday, November 2, 2026
Homeಅಪರಾಧಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಶನ್ ಪ್ರಕರಣ: ಕೃಪಾ ಆಳ್ವ ಸೇರಿ ಮೂವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಶನ್ ಪ್ರಕರಣ: ಕೃಪಾ ಆಳ್ವ ಸೇರಿ ಮೂವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ 66ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಿದ್ದರಾಮಯ್ಯ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೃಪಾ ಆಳ್ವ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಮೂವರಿಗೂ ಮಧ್ಯಂತರ ಜಾಮೀನು ನೀಡಿದೆ.

ಮೂವರು ತಲಾ ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ಸಾಕ್ಷ್ಯ ನಾಶಪಡಿಸಬಾರದು ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಅಲ್ಲದೆ, ಜಾಮೀನು ಅರ್ಜಿ ವಜಾಗೊಂಡಲ್ಲಿ ತಕ್ಷಣವೇ ತನಿಖಾಧಿಕಾರಿಯ ಮುಂದೆ ಶರಣಾಗುವಂತೆಯೂ ಸೂಚಿಸಿದೆ.

ಇನ್ನು ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ರಾಕೇಶ್ ಶೆಟ್ಟಿ, ಚಂದನ್, ಮೋಹನ್ ಗೌಡ ಹಾಗೂ ಪ್ರಜ್ವಲ್ ಪ್ರಸಾದ್ ಅವರ ಅರ್ಜಿಗಳ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಲಾಗಿದೆ.

ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಬಿ.ಎನ್. ಜಗದೀಶ್ ನ್ಯಾಯಾಲಯಕ್ಕೆ ಹಾಜರಾಗಿ, ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!