Friday, October 30, 2026
Homeಕರಾವಳಿಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವ ಕಾಂಗ್ರೆಸ್‌ನಿಂದ 6 ವರ್ಷ ಉಚ್ಛಾಟನೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವ ಕಾಂಗ್ರೆಸ್‌ನಿಂದ 6 ವರ್ಷ ಉಚ್ಛಾಟನೆ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ ಕ್ಲೀನ್ ಚಿಟ್ ನೀಡಿದ ಬೆನ್ನಲ್ಲೇ, ಹೈಪ್ರೊಫೈಲ್ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಮಹಿಳಾ ನಾಯಕಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

ಸ್ವಪಕ್ಷೀಯರ ಕೈವಾಡದ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯನವರು ಕೃಪಾ ಆಳ್ವ ಅವರ ಹೆಸರು ಪ್ರಸ್ತಾಪಿಸಿದ್ದರು. ಪಕ್ಷವಿರೋಧಿ ಚಟುವಟಿಕೆ ಮತ್ತು ಕಾರಣ ಕೇಳಿ ನೋಟೀಸ್‌ಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಈ ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 24ರಂದು ಬೆಂಗಳೂರಿನ CEN ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ಕೃಪಾ ಆಳ್ವಾ, ಇದೀಗ ಏಕಾಏಕಿ ದೇಶ ತೊರೆದಿದ್ದಾರೆ ಎನ್ನಲಾಗಿದೆ. 1992ರಲ್ಲಿ ಹತ್ಯೆಗೀಡಾದ ಮಂಗಳೂರಿನ ಯುವ ನಾಯಕ ಅಮರ್ ಆಳ್ವ ಅವರ ಪತ್ನಿಯಾಗಿರುವ ಇವರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ 2015ರಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕರ್ತವ್ಯ ನಿರ್ವಹಿಸಿದ್ದರು.

- Advertisement -

Latest News

error: Content is protected !!